ಉಡುಪಿ: ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್(22) ಕಿಶನ್(20) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000/- ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…