ಕರಾವಳಿ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದಿಂದ ನಡೆದ ವಿನೂತನ ಕಾರ್ಯಕ್ರಮ; ನಿಟ್ಟೆ ಹವಾಮಾನ ಕ್ರಿಯಾ ಯೋಜನೆಗೆ ಚಾಲನೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದಿಂದ ನಡೆದ ವಿನೂತನ ಕಾರ್ಯಕ್ರಮ; ನಿಟ್ಟೆ ಹವಾಮಾನ ಕ್ರಿಯಾ ಯೋಜನೆಗೆ ಚಾಲನೆ

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ನಿಟ್ಟೆ ಹವಾಮಾನ ಕ್ರಿಯಾ ಯೋಜನೆ – 2024 (Nitte Climate Action Program 2024) ಕಾರ್ಯಕ್ರಮಕ್ಕೆ ನಗರದ ಅಂಬೇಡ್ಕರ್‌ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್‌ ಅವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಪರಿಸರ ಪ್ರಿಯವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ರಕ್ಷಣೆ ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ಪರಿಸರವನ್ನು ಕಾಪಾಡುವುದು ನಮ್ಮ ಕೆಲಸವಲ್ಲ ಸರ್ಕಾರದ ಕೆಲಸ ಎಂದು ಭಾವಿಸುವುದು ತಪ್ಪು. ಅದು ಎಲ್ಲ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ಪ್ರಮುಖವೆಂದು ಭಾವಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿವೆ. ವಿದ್ಯಾರ್ಥಿಗಳಲ್ಲಿ ಪರಿಸರ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯುಕ್ರಮಕ್ಕೆ ಸರ್ಕಾರವು ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ ಎಂದು ಅವರು ವಿವರಿಸಿದರು.
ಕಾರ್ಯಕ್ರಮದ ಗೌರವ ಅತಿಥಿಯಾಗಿ ಮಾತನಾಡಿದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಎಸ್‌. ಪಟಗಾರ್, ಶಾಲಾ ಮಟ್ಟದಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕಾದ್ದು ಅತಿ ಮುಖ್ಯವಾದ ಕೆಲಸವಾಗಿದೆ. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯವು ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಎರಡೂ ವಿಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಈ ವರ್ಷ ಮಂಗಳೂರು ಉತ್ತರ ವಿಭಾಗದ 103 ಶಾಲೆಗಳಿಂದ 13 ಸಾವಿರ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಬಹು ಸಂತಸದ ವಿಷಯ ಎಂದು ಅವರು ಶ್ಲಾಘಿಸಿದರು.

 

 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್‌ ಮಾತನಾಡಿ, ಮಾಲಿನ್ಯ ನಿಯಂತ್ರಣದ ಮಹತ್ವವನ್ನು ವಿವರಿಸಿದರು. ಮಾಲಿನ್ಯ ನಿಯಂತ್ರಣದಿಂದ ಭವಿಷ್ಯವನ್ನು ಹೇಗೆ ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ಅವರು ಉದಾಹರಣೆಗಳ ಸಮೇತ ವಿವರಣೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಡಾ.ಎಂ.ಎಸ್.ಮೂಡಿತ್ತಾಯ ಅವರು, ಪರಿಸರ ರಕ್ಷಣೆಗೆ ನಿಟ್ಟೆ ವಿಶ್ವವಿದ್ಯಾನಿಲಯವು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಪರಿಸರ ರಕ್ಷಣೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು. ಇದಕ್ಕಾಗಿ ನಿಟ್ಟೆ ವಿಶ್ವವಿದ್ಯಾನಿಲಯವು ಸದಾ ಸಿದ್ಧವಿದೆ. ಈ ಆಶಯದ ಪ್ರತಿಫಲವೇ
ನಿಟ್ಟೆ ಹವಾಮಾನ ಕ್ರಿಯಾ ಯೋಜನೆ ಎಂದು ಅವರು ವಿಶ್ಲೇಷಿಸಿದರು. ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್‌) ಆರೋಗ್ಯ ಮತ್ತು ಸುರಕ್ಷೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುದರ್ಶನ್ ಹಾಗೂ ಪರಿಸರ ವಿಭಾಗದ ಪ್ರಧಾನ ವ್ಯವಸ್ಥಾಪಕ ಪ್ರಸನ್ನ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಸುಸ್ಥಿರ ಅಭಿವೃದ್ಧಿ ಕೋಶದ ಪ್ರಧಾನ ಸಂಚಾಲಕರು ಹಾಗೂ ವಿಶ್ವವಿದ್ಯಾನಿಲಯದ ಉಪ ಕುಲಸಚಿವರಾದ ಪ್ರೊ.ಡಾ.ಸುಮಾ ಬಲ್ಲಾಳ್‌ ಅವರು ಸ್ವಾಗತ ಭಾಷಣ ಮಾಡಿದರು. ಡಾ.
ಮುಂಡಕೂರು ರಾಮಣ್ಣ ಶೆಟ್ಟಿ ಸ್ಮಾರಕ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಲತಾ ರಾವ್ ವಂದನಾರ್ಪಣೆ ಮಾಡಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನಿಟ್ಟೆ ವಿಶ್ವವಿದ್ಯಾನಿಲಯವು ಹವಾಮಾನ ಕ್ರಿಯಾ ಯೋಜನೆ ಕುರಿತು ನಿರ್ಮಿಸಿರುವ
ಕಿರು ವಿಡಿಯೊ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು. ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್‌ ಕಮ್ಯುನಿಕೇಷನ್ ಸಹ ಪ್ರಾಧ್ಯಾಪಕ ಡಾ. ನೇಸರ ಕಾಡನಕುಪ್ಪೆ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟರು.
ನಿಟ್ಟೆ ಹವಾಮಾನ ಕ್ರಿಯಾ ಯೋಜನೆಯು ಒಟ್ಟು 5 ವರ್ಷಗಳ ಕಾಲ ನಡೆಯಲಿದ್ದು, ಇದು ಎರಡನೇಯ ವರ್ಷದ ಕಾರ್ಯಕ್ರಮವಾಗಿದೆ. 2024ರ ಈ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಲಯದಿಂದ ಒಟ್ಟು 103 ಶಾಲೆಗಳಿಂದ
13 ಸಾವಿರ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ತಾಂತ್ರಿಕ ಸಂಶೋಧನೆ ನಿರ್ದೇಶಕ ಪ್ರೊ.ಡಾ.ಜಿ. ಶ್ರೀನಿಕೇತನ್, ಸುಸ್ಥಿರ ಅಭಿವೃದ್ಧಿ ಕೋಶದ ಸದಸ್ಯ ಕಾರ್ಯದರ್ಶಿ ಡಾ.ವಿನಾಯಕ ಶೇಟ್, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಶಶಿಕುಮಾರ ಶೆಟ್ಟಿ ಭಾಗವಹಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

16 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

16 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

16 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

16 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

16 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago