ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈ ದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದೇವೆ“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
”ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದ ಜೊಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು. ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…