ಕ್ರೈಮ್

ಮಂಗಳೂರು: ಉಳಾಯಿಬೆಟ್ಟು ಬಾಲಕಿಯ ರೇಪ್&ಮರ್ಡರ್; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ…!!

2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಹಾಗೂ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಧೀಶ ಮಾನು ಅವರು ಆದೇಶಿಸಿದ್ದಾರೆ.

2021 ನ.21ರಂದು ಮಧ್ಯಾಹ್ನ ಊಟ ಮುಗಿಸಿ ಆಟವಾಡಲು ಒಡಹುಟ್ಟಿದವರ ಜತೆ ಹೊರಗೆ ಹೋದ ಬಾಲಕಿ ಉಳಿದ ಮೂವರು ವಾಪಸ್ ಬಂದರೂ ಬಾಲಕಿ ವಾಪಸ್ ಬಂದಿರಲಿಲ್ಲ. ಪೋಷಕರು ಹುಡುಕಾಡಿದಾಗ ಬಾಲಕಿ ಸಂಜೆ 6 ಗಂಟೆ ಸುಮಾರಿಗೆ ಕಾರ್ಖಾನೆಯೊಳಗಿನ ಚರಂಡಿಗೆ ಬಿದ್ದಿರುವುದು ಕಂಡು ಬಂದಿದೆ. ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಅಪರಾಧದ ಗಂಭೀರತೆಯ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಿ. ತಂಡಗಳು ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷ್ಯಗಳು, ಪ್ರತ್ಯಕ್ಷದರ್ಶಿಗಳು, ಇತ್ಯಾದಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯ 21 ವರ್ಷದ ಯುವಕ, ಅದೇ ಸ್ಥಳದ 20 ವರ್ಷದ ಮತ್ತೊಬ್ಬ ಯುವಕ, ಜಾರ್ಖಂಡ್‌ನ ರಾಂಚಿ ಜಿಲ್ಲೆಯ 33 ವರ್ಷದ ವ್ಯಕ್ತಿ ಮತ್ತು ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ನಿವಾಸಿ 20 ವರ್ಷದ ಯುವಕ. ಇವರಲ್ಲಿ ಮೂವರು ಕಾರ್ಖಾನೆಯಲ್ಲಿ ಕೂಲಿಯಾಗಿ ಕೆಲಸ ಮಾಡುತ್ತಿದ್ದರೆ, ಮತ್ತೊಬ್ಬರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದು, ಮೇಲಿನ ನಾಲ್ವರಲ್ಲಿ ಒಬ್ಬರನ್ನು ಭೇಟಿಯಾಗಲು ಇಲ್ಲಿಗೆ ಬಂದಿದ್ದರು.

ಇಬ್ಬರು ಆರೋಪಿಗಳು ಹಲವು ಬಾರಿ ಬಾಲಕಿಯನ್ನು ತಮ್ಮ ಕೋಣೆಗೆ ಕರೆಸಿಕೊಂಡು ಆಕೆಗೆ ಚಾಕೊಲೇಟ್ ಇತ್ಯಾದಿಗಳನ್ನು ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದರು. 2021 ನವೆಂಬರ್ 21 ರಂದು ಮಧ್ಯಾಹ್ನ ಬಾಲಕಿ ಆಟವಾಡಲು ಹೋದಾಗ, ಆರೋಪಿಗಳು ಬಾಲಕಿಯ ಬಾಯಿಯನ್ನು ಬಿಗಿಯಾಗಿ ಹಿಡಿದುಕೊಂಡು ಬಲವಂತವಾಗಿ ಕೋಣೆಗೆ ಕರೆದೊಯ್ದ ನಂತರ ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ರಕ್ತಸ್ರಾವ ಮತ್ತು ನೋವಿನಿಂದ ಬಾಲಕಿ ಜೋರಾಗಿ ಅಳುತ್ತಿದ್ದಾಗ, ಒಬ್ಬ ವ್ಯಕ್ತಿ ಅವಳನ್ನು ಕೊಚ್ಚಿ ಸಾಯಿಸಿಬಿಟ್ಟದ್ದನು. ನಂತರ ದೇಹವನ್ನು ಚರಂಡಿಗೆ ಎಸೆದು ದುಷ್ಕೃತ್ಯ ಎಸಗಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago