ಮುಲ್ಕಿ:ಮುಲ್ಕಿ ಪೊಲೀಸ್ ಠಾಣಾ ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52 ) ಎಂಬಾತನನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂದನ ವಿಧಿಸಿದೆ
ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ ಧರ್ಮಸ್ಥಳ ಠಾಣೆ, ಬೆಳ್ತಂಗಡಿ ಠಾಣೆ,ಉಡುಪಿ ನಗರ ಠಾಣೆ, ಹೆಬ್ರಿ ಠಾಣೆ,, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರೆ ಠಾಣೆ, ಕಾರ್ಕಳ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ ಹಾಗೂ ಮಹಾರಾಷ್ಟ್ರ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ವಿದ್ಯಾಧರ್ ಡಿ ಬೈಕೇರಿಕರ್ ಹಾಗೂ ಪೊಲೀಸ್ ಉಪ ನಿರೀಕ್ಷರಾದ ಅನಿತಾ ರವರ ಮಾರ್ಗದರ್ಶನದಲ್ಲಿ, ಠಾಣಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರಾದ ಉದಯ, ಜಯರಾಮ್ ಜೆ ರವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…