ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.
ಪಿಕಪ್ ಒಂದು ರಸ್ತೆಯಿಂದ ಮನೆಯ ಮೇಲೆ ಬಿದ್ದ ಘಟನೆ ವಿಟ್ಲದ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಸಂಭವಿಸಿದೆ. ಪರಿಣಾಮ ಮಹಿಳೆಯೊಬ್ಬರು ಮನೆಯೊಳಗೆ ಸಿಲುಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆಯಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ. ಮಹಿಳೆಯನ್ನು ಹೊರ ತೆಗೆಯಲು ವಾಹನವನ್ನು ತೆರವು ಮಾಡಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಹಾಗೂ ತುರ್ತು ಸೇವಾ ವಾಹನ ಘಟನಾ ಸ್ಥಳದಲ್ಲಿ ಹಾಜರಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…