ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಜೀ ಸಚಿವ ಅಭಯ ಚಂದ್ರ ಜೈನ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸ ಹಾಗೂ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಅಕೌಂಟೆಂಟ್ ಶಿವಶಂಕರ್, ಲಕ್ಷದೀಪೋತ್ಸವ ಸಮಿತಿಯ ಪದಾಧಿಕಾರಿಗಳಾದ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ಪುರುಷೋತ್ತಮ ಬಡಗುಹಿತ್ಲು, ಚಿರಾಗ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು
ಲಕ್ಷದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಿಗ್ಗೆ ಲಕ್ಷ ಕುಂಕುಮಾರ್ಚನೆ, ಸಂಜೆ 4 ಗಂಟೆಗೆ ಸಾರ್ವಜನಿಕ ಶನಿಪೂಜೆ, ರಾತ್ರಿ 8 ಗಂಟೆಗೆ ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು ಬಳಿಕ ಸಾರ್ವಜನಿಕ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…