ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು.
ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್ ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್ ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು. ಮತ್ತೊಂದೆಡೆ ಮಹಾಲಕ್ಷ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮೀ ಬ್ಯಾಂಕ್ ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಎಂಬುವುದನ್ನು ಕಾದು ನೋಡಬೇಕಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…