ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ.
ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿಯಾಗಿದೆ. ಇದರ ಪರಿಣಾಮ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಡೆ ಲಾಕ್ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್ ಓಪನ್ ಮಾಡಲು ಸಾಧ್ಯವಾಗದೆ ಇದ್ದಾಗ ಕಾರ್ಕಳ ಅಗ್ನಿಶಾಮಕದವರನ್ನು ಕರೆಯಿಸಿ ಬೋಲ್ಟ್ ಕಟರ್ ಮೂಲಕ ಡೋರ್ ಓಪನ್ ಮಾಡಿ, ಬಳಿಕ ಗಾಯಾಳುವನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
ಗಾಯಾಳುವನ್ನು ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿ ಸಂದೇಶ್ (35) ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…