ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜೀ ಸಚಿವ ಅಭಯ ಚಂದ್ರ ಜೈನ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸ ಹಾಗೂ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಅಕೌಂಟೆಂಟ್ ಶಿವಶಂಕರ್, ಲಕ್ಷದೀಪೋತ್ಸವ ಸಮಿತಿಯ ಪದಾಧಿಕಾರಿಗಳಾದ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ಪುರುಷೋತ್ತಮ ಬಡಗುಹಿತ್ಲು, ಚಿರಾಗ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಲಕ್ಷದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಿಗ್ಗೆ ಲಕ್ಷ ಕುಂಕುಮಾರ್ಚನೆ, ಸಂಜೆ 4 ಗಂಟೆಗೆ ಸಾರ್ವಜನಿಕ ಶನಿಪೂಜೆ, ರಾತ್ರಿ 8 ಗಂಟೆಗೆ ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು ಬಳಿಕ ಸಾರ್ವಜನಿಕ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…