ಜನ ಮನದ ನಾಡಿ ಮಿಡಿತ

Advertisement

ಫ್ರಾನ್ಸ್‌ನಲ್ಲಿ ಭಾರತದ ಯುಪಿಐ ಬಳಕೆ, ವಿದ್ಯಾರ್ಥಿಗಳಿಗೆ 5 ವರ್ಷದ ದೀರ್ಘಾವಧಿಯ ಪೋಸ್ಟ್‌ ಸ್ಟಡಿ ವೀಸಾ ಸೌಲಭ್ಯ: ಪ್ರಧಾನಿ ಮೋದಿ

ಪ್ಯಾರಿಸ್ (ಫ್ರಾನ್ಸ್): ಪ್ರಧಾನಿ ನರೇಂದ್ರ ಮೋದಿ ಯವರ ಫ್ರಾನ್ಸ್ ಬೇಟಿ ಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಜೊತೆಗೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಹಾಗು ಫ್ರಾನ್ಸ್ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದದ ಮೂಲದ ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಮುಂದಿನ ದಿನಗಳಲ್ಲಿ ರೂಪಾಯಿಗಳಲ್ಲಿ ವ್ಯವಹಾರ ಮಾಡಲು ಸಾಧ್ಯವಾಗುತ್ತದೆ. ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಭಾರತದ ಮೊಬೈಲ್ ಆಧಾರಿತ ಪಾವತಿ ವ್ಯವಸ್ಥೆಯಾಗಿದೆ. ಈ ವರ್ಷದ ಆರಂಭದಲ್ಲಿ UPI ಮತ್ತು ಸಿಂಗಾಪುರದ ‘PayNow ‘ ಎರಡೂ ದೇಶಗಳ ಬಳಕೆದಾರರಿಗೆ ಗಡಿಯಾಚೆಗಿನ ವಹಿವಾಟುಗಳನ್ನು ಮಾಡಲು ಅನುಕೂಲವಾಗುವಂತೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದೀಗ ಫ್ರಾನ್ಸ್ ಜೊತೆಗಿನ ಈ ಒಪ್ಪಂದವು ಸಹ ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಅನುಕೂಲವಾಗಲಿದೆ. ಡಿಜಿಟಲ್ ಮೂಲಸೌಕರ್ಯವು ಎರಡು ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ. ಭಾರತ ಮತ್ತು ಫ್ರಾನ್ಸ್ ದೀರ್ಘಕಾಲದಿಂದ ಪುರಾತತ್ವ ಕಾರ್ಯಾಚರಣೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ” ಎಂದು ಮೋದಿ ಹೇಳಿದರು.

5 ವರ್ಷದ ದೀರ್ಘ ಅವಧಿಯ ಪೋಸ್ಟ್‌ ಸ್ಟಡಿ ವೀಸಾ : ಫ್ರಾನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಈಗ ಐದು ವರ್ಷಗಳ ದೀರ್ಘಾವಧಿಯ ಅಧ್ಯಯನ ವೀಸಾವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ತಿಳಿಸಿದರು. ಈ ಹಿಂದೆ ಭಾರತೀಯ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕೆಲಸದ ವೀಸಾ ನೀಡಲಾಗುತ್ತಿತ್ತು.

ಫ್ರಾನ್ಸ್ ಪ್ರಧಾನಿ ಎಲಿಸಬೆತ್ ಬೋರ್ನ್ ಅವರು ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಎರಡು ದಿನಗಳ ಅಧಿಕೃತ ಭೇಟಿಗಾಗಿ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!