ಪ್ಯಾರಿಸ್ (ಫ್ರಾನ್ಸ್): ಪ್ರಧಾನಿ ನರೇಂದ್ರ ಮೋದಿ ಯವರ ಫ್ರಾನ್ಸ್ ಬೇಟಿ ಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಜೊತೆಗೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಹಾಗು ಫ್ರಾನ್ಸ್ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದದ ಮೂಲದ ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಮುಂದಿನ ದಿನಗಳಲ್ಲಿ ರೂಪಾಯಿಗಳಲ್ಲಿ ವ್ಯವಹಾರ ಮಾಡಲು ಸಾಧ್ಯವಾಗುತ್ತದೆ. ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಭಾರತದ ಮೊಬೈಲ್ ಆಧಾರಿತ ಪಾವತಿ ವ್ಯವಸ್ಥೆಯಾಗಿದೆ. ಈ ವರ್ಷದ ಆರಂಭದಲ್ಲಿ UPI ಮತ್ತು ಸಿಂಗಾಪುರದ ‘PayNow ‘ ಎರಡೂ ದೇಶಗಳ ಬಳಕೆದಾರರಿಗೆ ಗಡಿಯಾಚೆಗಿನ ವಹಿವಾಟುಗಳನ್ನು ಮಾಡಲು ಅನುಕೂಲವಾಗುವಂತೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದೀಗ ಫ್ರಾನ್ಸ್ ಜೊತೆಗಿನ ಈ ಒಪ್ಪಂದವು ಸಹ ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಅನುಕೂಲವಾಗಲಿದೆ. ಡಿಜಿಟಲ್ ಮೂಲಸೌಕರ್ಯವು ಎರಡು ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ. ಭಾರತ ಮತ್ತು ಫ್ರಾನ್ಸ್ ದೀರ್ಘಕಾಲದಿಂದ ಪುರಾತತ್ವ ಕಾರ್ಯಾಚರಣೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ” ಎಂದು ಮೋದಿ ಹೇಳಿದರು.
5 ವರ್ಷದ ದೀರ್ಘ ಅವಧಿಯ ಪೋಸ್ಟ್ ಸ್ಟಡಿ ವೀಸಾ : ಫ್ರಾನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಈಗ ಐದು ವರ್ಷಗಳ ದೀರ್ಘಾವಧಿಯ ಅಧ್ಯಯನ ವೀಸಾವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ತಿಳಿಸಿದರು. ಈ ಹಿಂದೆ ಭಾರತೀಯ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕೆಲಸದ ವೀಸಾ ನೀಡಲಾಗುತ್ತಿತ್ತು.
ಫ್ರಾನ್ಸ್ ಪ್ರಧಾನಿ ಎಲಿಸಬೆತ್ ಬೋರ್ನ್ ಅವರು ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಎರಡು ದಿನಗಳ ಅಧಿಕೃತ ಭೇಟಿಗಾಗಿ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…