ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಡಾನ್ ಬಾಸ್ಕೋ ಸಭಾಂಗಣದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ ನಿಧನ

 

ಮಂಗಳೂರು: ಖ್ಯಾತ ಸಾಂಸ್ಕೃತಿಕ ಸಂಘಟಕ, ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62)ರವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿ ಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆ ಗಳಿಸಿದ್ದರು. ಸ್ಪರ್ಧೆಗಳ ಆಯೋಜನೆ, ರಂಗಭೂಮಿ ವಿನ್ಯಾಸ ಮತ್ತು ರಂಗಭೂಮಿಯ ವಸ್ತ್ರ ವಿನ್ಯಾಸ ಹಾಗೂ ನಿರ್ವಹಣೆಯಲ್ಲಿ ವಿಶೇಷ ಪರಿಣಿತಿ ಹೊಂದಿದವರಾಗಿದ್ದರು. ಬೋನಿಫೇಸ್ ಪಿಂಟೋ ಅವರ ಪಾರ್ಥಿವ ಶರೀರವನ್ನು ನ. 11ರಂದು ಡಾನ್ ಬಾಸ್ಕೋ ಹಾಲ್‌ನಲ್ಲಿ ಮಧ್ಯಾಹ್ನ 2.15 ಕ್ಕೆ ಮತ್ತು ಜೆಪ್ಪು ಚರ್ಚ್ನಲ್ಲಿ 3 .30ಕ್ಕೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಿಕರು ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!