ಮಂಗಳೂರು: ಖ್ಯಾತ ಸಾಂಸ್ಕೃತಿಕ ಸಂಘಟಕ, ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62)ರವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿ ಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆ ಗಳಿಸಿದ್ದರು. ಸ್ಪರ್ಧೆಗಳ ಆಯೋಜನೆ, ರಂಗಭೂಮಿ ವಿನ್ಯಾಸ ಮತ್ತು ರಂಗಭೂಮಿಯ ವಸ್ತ್ರ ವಿನ್ಯಾಸ ಹಾಗೂ ನಿರ್ವಹಣೆಯಲ್ಲಿ ವಿಶೇಷ ಪರಿಣಿತಿ ಹೊಂದಿದವರಾಗಿದ್ದರು. ಬೋನಿಫೇಸ್ ಪಿಂಟೋ ಅವರ ಪಾರ್ಥಿವ ಶರೀರವನ್ನು ನ. 11ರಂದು ಡಾನ್ ಬಾಸ್ಕೋ ಹಾಲ್‌ನಲ್ಲಿ ಮಧ್ಯಾಹ್ನ 2.15 ಕ್ಕೆ ಮತ್ತು ಜೆಪ್ಪು ಚರ್ಚ್ನಲ್ಲಿ 3 .30ಕ್ಕೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಿಕರು ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…