ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬೆಳಗ್ಗೆ ಶುದ್ಧ ಕಲಶ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ಮಹಾಪೂಜೆ, ತಂತ್ರಬಲಿಯ ಬಳಿಕ ಶ್ರೀ ದೇವರ ಲಕ್ಷದೀಪೋತ್ಸವ ಸವಾರಿ, ದೇವಸ್ಥಾನದಲ್ಲಿ ಬಲಿ ಉತ್ಸವ ನೆರವೇರಿತು.
ದೇವಸ್ಥಾನದ ಆಡಳಿತಾಧಿಕಾರಿ ಜೈಪ್ರಕಾಶ್ ಸಿ., ಪ್ರಧಾನ ಅರ್ಚಕ ವೇ|ಮೂ| ಸಂಪ್ರೀತ್ ಭಟ್, ಸೀಮೆಯ ಭಕ್ತರು ಪಾಲ್ಗೊಂಡಿದ್ದರು. ಪೇಟೆ ಸವಾರಿಯ ಸಂದರ್ಭದಲ್ಲಿ ಸುಮಾರು ೮ ಕಟ್ಟೆಗಳಲ್ಲಿ ಕಟ್ಟೆ ಪೂಜೆ, ಗುರ್ಜಿ ಉತ್ಸವ ನಡೆಯಿತು.





