ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸಿ ಗಮನಸೆಳೆದಿದ್ದಾರೆ.
ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿಸಿದ್ದಾರೆ.ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಅನುಕೂಲ ಕಲ್ಪಿಸಿದೆ.
ಆರ್ಥಿಕ ನೆರವು ಗೃಹಲಕ್ಷ್ಮಿ!
ತನ್ನ ಸ್ಕೂಟರ್ ನಲ್ಲಿ ಸಲೀಂ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಭಿತ್ತಿಪತ್ರ ಅಂಟಿಸಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮರ್, ಲಕ್ಣ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿದ್ದಾರೆ.
ಶಾಸಕರಿಂದ ಸನ್ಮಾನ
ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್ ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ. ತನಗೆ ಕೆಲಸಕ್ಕೆ ತೆರಳಲು ಈ ವಾಹನ ನೆರವಾಗಲಿದೆ. ಸರಕಾರಕ್ಕೆ ಹಾಗೂ ಶಾಸಕರಿಗೆ ಸಲೀಂ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಾಸಕರು ಸಲೀಂರನ್ನು ಸನ್ಮಾನಿಸಿ ಗೌರವಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…