ಪುತ್ತೂರು: ತರಗತಿಯಲ್ಲಿ ಬಸ್ಕಿ ಹೊಡೆಯುವ ಶಿಕ್ಷೆ ಅನುಭವಿಸಿ ವಿದ್ಯಾರ್ಥಿನಿಯೋರ್ವಳು ಅಸ್ವಸ್ತಳಾದ ಹಿನ್ನಲೆಯಲ್ಲಿ ಆಕೆಯ ಪೋಷಕರು ಶಾಲಾ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ ಘಟನೆ ನಡೆದಿದೆ. ಪುತ್ತೂರಿನ ಕಾವು ಮಾಡೂರು ಸರ್ಕಾರಿ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಸ್ವಸ್ಥ ವಿದ್ಯಾರ್ಥಿನಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ತರಗತಿಯಲ್ಲಿ ಕೀಟಲೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಪ್ರಭಾರ ಮುಖ್ಯ ಶಿಕ್ಷಕ ಬಸ್ಕಿ ಹೊಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿಯ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ, ಮಕ್ಕಳ ಹಕ್ಕುಗಳ ಆಯೋಗ ಮತ್ತು ಪುತ್ತೂರಿನ ಶಾಸಕರಿಗೆ ದೂರು ನೀಡಿದ್ದಾರೆ.



