ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಭಾಗವಹಿಸಿದರು.
ಶ್ರೀಕೃಷ್ಣ ದೇವರ ದರ್ಶನ ಮಾಡಿದ ರಾಜ್ಯಪಾಲರು, ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.
ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರವಿಗ್ರಹಕ್ಕೆ ನಮಿಸಿದರು.
ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು. ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…