ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಬಂಗಾರು ಹನುಮಂತ ಅವರ ಪರವಾಗಿ ವಡ್ಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರಕಾರವು ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಿವಾದಗಳೇ ಬಂಡವಾಳವಾಗಿದೆ ಹೊರತು ಜನರ ಸಂಕಷ್ಟ ಕೇಳುವವರಿಲ್ಲದಂತಾಗಿದೆ. ಗ್ಯಾರಂಟಿ ಯೋಜನೆಗಳು ಮೂಲೆ ಸೇರುತ್ತಿರುವಂತೆ ರಾಜ್ಯ ಸರಕಾರವೂ ಕೂಡ ಮೂಲೆ ಗುಂಪಾಗುವ ದಿನ ದೂರವಿಲ್ಲ ಎಂದು ಹೇಳಿದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಶತ ಸಿದ್ಧ. ಕಾಂಗ್ರೆಸಿನ ಷಡ್ಯಂತ್ರಗಳಿಗೆ ಮತದಾರ ಮರುಳಾಗದೆ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ಕುರಿತು ಕ್ಷೇತ್ರದ ಜನರಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗುತಿದ್ದು ಬಿಜೆಪಿ ಗೆಲುವಿನ ನಗೆ ಬೀರಲಿದೆ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…