ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಿರುವ ಆರೋಪಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮತ್ತು ಆರೋಪಿಗಳನ್ನು ಬಂಧಿಸಿ ಶಾಂತಿ ಕಾಪಾಡುವಂತೆ ಈಶ್ವರಮಂಗಲ ಮುಸ್ಲಿಂ ಒಕ್ಕೂಟದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಶಾಂತಿಯುತವಾಗಿರುವ ಪುತ್ತೂರಿನಲ್ಲಿ ಏನಾದರೂಮಾಡಿ ಗಲಭೆ ಎಬ್ಬಿಸಬೇಕು ಎಂಬ ಉದ್ದೇಶದಿಂದ ಕೆಲವೊಂದು ಕಿಡಿಗೇಡಿಗಳು ಧಾರ್ಮಿಕ ಮಹಾನ್ ವ್ಯಕ್ತಿಗಳಿಗೆ ನಿಂದನೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ತಕ್ಕ ಶಾಸ್ತಿಯಾಗಬೇಕು, ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಧರ್ಮದ ವಿಚಾರದಲ್ಲಿಜನರ ಭಾವನೆ ಕೆರಳಿಸುವ ಯಾರೇ ಆಗಲಿ ಬಂಧಿಸಿಮಟ್ಟ ಹಾಕಿಎಂದು ಸೂಚನೆ ನೀಡಿದರು.
ಈಸಂಧರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಮಹಮ್ಮದ್ ಬಡಗನ್ನೂರು, ಮೂಸಾನ್ ಕರ್ನೂರು,ಅಬ್ದುಲ್ ರಹಿಮಾನ್ ಮೇನಾಲ,ಸಿ ಎ ಅಬೂಬಕ್ಕರ್,ಇಬ್ರಾಹಿಂ ,ಕೆ ಎಂ ಮಹಮ್ಮದ್, ಮಹಮ್ಮದ್‌ಕುಂಞಿಮೊದಲಾದವರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…