ಜನ ಮನದ ನಾಡಿ ಮಿಡಿತ

Advertisement

ನ.14 : ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕಿನ ನೂತನ ವಿಟ್ಲ ಶಾಖೆ ಶುಭಾರಂಭ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ.14 ಗುರುವಾರ ವಿಟ್ಲ ಎಂಪೈರ್ ಮಾಲ್ನ ಒಂದನೇ ಮಹಡಿಯಲ್ಲಿ ನಡೆಯಲಿದೆ ಎಂದು ಬ್ಯಾಂಕ್ನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಕಿಶೋರ್ ಕೋಳತ್ತಾಯ ತಿಳಿಸಿದ್ದಾರೆ.

 

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1909 ರಲ್ಲಿ ಅಂದರೆ 115 ವರ್ಷಗಳ ಹಿಂದೆ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರಿಂದ ಸ್ಥಾಪಿಸಲ್ಪಟ್ಟ ಪುತ್ತೂರು ಕೊ ಓಪರೇಟಿವ್ ಟೌನ್ ಬ್ಯಾಂಕ್ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ. 2019 ರ ಸಾಲಿನಲ್ಲಿ ಒಟ್ಟು 98 ಕೋಟಿ ಇದ್ದ ವ್ಯವಹಾರ ಪ್ರಸ್ತುತ 120 ಕೋಟಿಗೆ ಮಿಕ್ಕಿದೆ. ಮೀಸಲು ಕ್ಷೇಮನಿಧಿ 2.39 ಕೋಟಿ ಇದ್ದದ್ದು 4.81 ಕೋಟಿಗೂ ಅಧಿಕವಿದೆ. ಪ್ರಸ್ತುತ ವಾರ್ಷಿಕ ಲಾಭ 1.55 ಕೋಟಿ ರೂ. ಆಗಿರುತ್ತದೆ. 2023-24ನೇ ವರ್ಷದಲ್ಲಿ ಮೀಸಲು ನಿಧಿಗೆ 77 ಲಕ್ಷಕ್ಕೂ ಮಿಕ್ಕಿ ವರ್ಗಾಯಿಸಲಾಗಿದ್ದು, ಇದುವರೆಗಿನ ದಾಖಲೆಯಾಗಿದೆ. ಕಳೆದ ಬಾರಿ ಸದಸ್ಯರಿಗೆ 10 ಶೇ. ಡಿವಿಡೆಂಡ್ ನೀಡಲಾಗಿದ್ದು, ಈ ವರ್ಷ 12 ಶೇ. ಡಿವಿಡೆಂಟ್ ನೀಡಲಾಗಿದೆ. ರಿಸರ್ವ್ಬ್ಯಾಂಕ್ನಿಯಮದಂತೆ ಶೇ.10 ಕ್ಕಿಂತ ಜಾಸ್ತಿ ಅನುಪಾತವಿರಬೇಕು. ಆದರೆ ನಮ್ಮ ಬ್ಯಾಂಕ್ಈ ವರ್ಷ ಅನುಪಾತ ಶೇ.33 ಆಗಿದೆ. ಇದು ಬ್ಯಾಂಕ್ನ ಸದೃಢತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ಚೌಟ ಉದ್ಘಾಟನೆ ನೆರವೇರಿಸಲಿದ್ದು, ಬ್ಯಾಂಕ್ಅಧ್ಯಕ್ಷ ಎನ್.ಕಿಶೋರ್ ಕೊಳತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭದ್ರತಾ ಕೊಠಡಿ, ಮಾಜಿ ಶಾಸಕ ಸಂಜೀವ ಮಠಂದೂರು ಗಣಕಯಂತ್ರ ಉದ್ಘಾಟಿಸುವರು. ಕ್ಯಾಂಪ್ಕೋ ಲಿ.ನ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪ್ರಥಮ ಠೇವಣಿ ಪತ್ರ ಹಸ್ತಾಂತರ ಮಾಡುವರು. ಅತಿಥಿಗಳಾಗಿ ಎಸ್ಸಿಡಿಸಿಸಿ ಬ್ಯಾಂಕ್ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್, ವಿಟ್ಲ ಪಟ್ಟಣ ಪಂಚಾಯತ್ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ, ವಿಟ್ಲ ಅರಮನೆಯ ಬಂಗಾರು ಅರಸರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿಶ್ವಾಸ್ಶೆಣೈ, ಸದಸ್ಯ ಚಂದ್ರಶೇಖರ ಬಪ್ಪಳಿಗೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ್ ಶೆಟ್ಟಿ, ಕಿರಣ್ ಕುಮಾರ್ ಬಲ್ನಾಡ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!