ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ ಎಸ್.ಟಿ.ಮೋರ್ಛದ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಮಂಡಲದ ಕೋಶಾಧಿಕಾರಿ ನಹುಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ರಾದ ಯತೀಂದ್ರ ಕೊಚ್ಚಿ ಮತ್ತು ಚಿತ್ರಾ ಪ್ರಸಾದ್ ರೈ ಅಂಕೊತ್ತಿಮಾರು, ತಾಲೂಕು ಎಸ್.ಸಿ ಮೋರ್ಚಾದ ಅಧ್ಯಕ್ಷ ರೋಹಿತ್ ಕಾವು, ನೆಟ್ಟಣಿಗೆ ಮೂಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ,ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ನಾರಾಯಣ ನಾಯ್ಕ ಚಾಕೋಟೆ,ಸೌಮ್ಯ ಬಾಲಸುಬ್ರಹ್ಮಣ್ಯ, ಭಾರತಿ ವಸಂತ್ ಕೌಡಿಚ್ಚಾರು, ಅನಿತಾ ಆಚಾರಿ ಮೂಲೆ, ರೇಣುಕಾ ಸತೀಶ್ ಕರ್ಕೆರ, ಮತ್ತು ಉಷಾ ರೇಖಾ ರೈ ಕೊಳ್ಳಾಜೆ, ಮಾಡ್ನರು ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಆಚಾರ್ಯ ಕಾವು, ಅರಿಯಡ್ಕ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಸಚಿನ್ ಪಾಪೆ ಮಜಲು, ವಿಶ್ವನಾಥ ಕುಲಾಲ್ ಪುತ್ತೂರು, ಜಿಲ್ಲಾ ಪ್ರ.ಶಿಕ್ಷಣ ಪ್ರಕೋಷ್ಠದ ಸದಸ್ಯ ತಿಲಕ್ ರೈ ಕುತ್ಯಾಡಿ, ಪ್ರಜ್ವಲ್ ಕೆರೆ ಮಾರು, ಗಣೇಶ್ ಪೂವಂದೂರು, ಉಮೇಶ್ ಮಾಡೂರು ಮತ್ತೀತರರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…