ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಬಾಲಕಿಯರ ಹಾಸ್ಟೆಲ್ ಒಳಗೆ ನುಗ್ಗಿದ ಆಗಂತುಕ, ದೂರು ನೀಡಿದ್ರೂ ಪೊಲೀಸರ ನಿರ್ಲಕ್ಷ್ಯ..!

ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನವೆಬರ್ 6 ರಂದು ಈ ಘಟನೆ ನಡೆದಿದ್ದು ಬಾಲಕಿಯರೇ ಇರುವ ಹಾಸ್ಟೆಲ್ ಗೆ ಅಪರಿಚಿತ ವ್ಯಕ್ತಿಯೋರ್ವ ನುಗ್ಗಿದ್ದಾನೆ. ಹಾಸ್ಟೆಲ್‌ನ ಸಿಸಿ ಕ್ಯಾಮಾರಾದಲ್ಲಿ ಆಗಂತುಕನ ಚಲನವಲನ ದಾಖಲಾಗಿದೆ. ಮಧ್ಯ ರಾತ್ರಿ ಸುಮಾರು 2.30 ರಿಂದ 3.30 ರ ವರೆಗೆ ಈ ಆಗಂತುಕ ಹಾಸ್ಟೆಲ್ ಒಳಗೇ ಇದ್ದ ಎನ್ನಲಾಗಿದೆ.

ಆಗಂತುಕನ ಚಲನವಲನವನ್ನು ಹಾಸ್ಟೆಲ್ ಬಾಲಕಿಯೋರ್ವಳು ಧೈರ್ಯ ಮಾಡಿ ವಿಡಿಯೋ ಕೂಡ ಮಾಡಿದ್ದಾಳೆ ಮತ್ತು ಹಾಸ್ಟೆಲ್ ನ ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಹಾಸ್ಟೆಲ್ ಸಿಸಿ ಕ್ಯಾಮಾರಾ ಪರಿಶೀಲಿಸಿದ ಹಾಸ್ಟೆಲ್ ವಾರ್ಡನ್ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆದ್ರೆ ಇದರ ಗಂಭೀರತೆ ಅರಿಯದ ಪುತ್ತೂರು ಮಹಿಳಾ ಠಾಣೆ ಪೋಲೀಸರು ಪ್ರಕರಣ ದಾಖಲಿಸಲು ಉದಾಸೀನತೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಉನ್ನತ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು ನ.10 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ನಿರ್ಲಕ್ಷಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!