ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನವೆಬರ್ 6 ರಂದು ಈ ಘಟನೆ ನಡೆದಿದ್ದು ಬಾಲಕಿಯರೇ ಇರುವ ಹಾಸ್ಟೆಲ್ ಗೆ ಅಪರಿಚಿತ ವ್ಯಕ್ತಿಯೋರ್ವ ನುಗ್ಗಿದ್ದಾನೆ. ಹಾಸ್ಟೆಲ್‌ನ ಸಿಸಿ ಕ್ಯಾಮಾರಾದಲ್ಲಿ ಆಗಂತುಕನ ಚಲನವಲನ ದಾಖಲಾಗಿದೆ. ಮಧ್ಯ ರಾತ್ರಿ ಸುಮಾರು 2.30 ರಿಂದ 3.30 ರ ವರೆಗೆ ಈ ಆಗಂತುಕ ಹಾಸ್ಟೆಲ್ ಒಳಗೇ ಇದ್ದ ಎನ್ನಲಾಗಿದೆ.
ಆಗಂತುಕನ ಚಲನವಲನವನ್ನು ಹಾಸ್ಟೆಲ್ ಬಾಲಕಿಯೋರ್ವಳು ಧೈರ್ಯ ಮಾಡಿ ವಿಡಿಯೋ ಕೂಡ ಮಾಡಿದ್ದಾಳೆ ಮತ್ತು ಹಾಸ್ಟೆಲ್ ನ ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಹಾಸ್ಟೆಲ್ ಸಿಸಿ ಕ್ಯಾಮಾರಾ ಪರಿಶೀಲಿಸಿದ ಹಾಸ್ಟೆಲ್ ವಾರ್ಡನ್ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆದ್ರೆ ಇದರ ಗಂಭೀರತೆ ಅರಿಯದ ಪುತ್ತೂರು ಮಹಿಳಾ ಠಾಣೆ ಪೋಲೀಸರು ಪ್ರಕರಣ ದಾಖಲಿಸಲು ಉದಾಸೀನತೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಉನ್ನತ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು ನ.10 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ನಿರ್ಲಕ್ಷಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…