ಪುತ್ತೂರು: ಒಡಿಯೂರು ಸೇವಾ ಬಳಗ ಪುತ್ತೂರು ಘಟಕದ 17 ನೇ ವಾರ್ಷಿಕೋತ್ಸವದ ಪ್ರಯುಕ್ತ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನ.೧೫ ರಂದು ಹಮ್ಮಿಕೊಂಡಿರುವ ಶ್ರೀರಾಮನಾಮತಾರಕ ಹವನಪೂರ್ವಕ `ಶ್ರೀ ಹನುಮಯಾಗ’ದ ಆಮಂತ್ರಣ ಪತ್ರಿಕೆಯನ್ನು ಬುಧವಾರ ನಗರದಲ್ಲಿ ವಿತರಿಸಲಾಯಿತು.

ಬೊಳುವಾರಿನಿಂದ ಆರಂಭಿಸಿ ನಗರದ ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕರಿಗೆ ಆಮಂತ್ರಣ ವಿತರಿಸಲಾಯಿತು.
ವೇ. ಮೂ. ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಹನುಮಯಾಗ ನಡೆಯಲಿದ್ದು, ಅಂದು ಬೆಳಿಗ್ಗೆ ಗಣಪತಿ ಹೋಮ, ಬಳಿಕ ಹನುಮಯಾಗದ ಸಂಕಲ್ಪ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುತ್ತೂರು ಇದರ ಮಹಿಳೆಯರಿಂದ ಭಜನಾ ಕಾರ್ಯಕ್ರಮ, ಶ್ರೀ ರಾಮನಾಮತಾರಕ ಮಂತ್ರ, ಶ್ರೀ ಹನುಮಾನ್ ಚಾಲೀಸಾ ಪಠಣ ನಡೆಯಲಿದೆ. ಬೆಳಗ್ಗೆ ಗಂಟೆ ೧೦.೩೦ಕ್ಕೆ ಯಾಗದ ಪೂರ್ಣಾಹುತಿ ನಡೆಯಲಿದೆ.
೧೧.೩೦ಕ್ಕೆ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಆಮಂತ್ರಣ ವಿತರಣೆಯ ಸಂದರ್ಭ ಒಡಿಯೂರು ಗುರುದೇವಾ ಸೇವಾ ಬಳಗ ಪುತ್ತೂರು ಘಟಕದ ಅಧ್ಯಕ್ಷ ಸುಧೀರ್ ನೋಂಡ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಪ್ರಮುಖರಾದ ಭವಾನಿಶಂಕರ ಶೆಟ್ಟಿ, ಜಗನ್ನಾಥ ಶೆಟ್ಟಿ, ಸುದೀಪ್ ಶೆಟ್ಟಿ, ಸೋಮನಾಥ ಗೌಡ, ಸವಿನ್ ಗೌಡ ಮೊದಲಾದವರು ಉಪಸ್ಥಿತರಿದ್ದರು.



