ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ: ಕೆ.ವಿ.ಪ್ರಭಾಕರ್
ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ
ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೃತಜ್ಞತೆ ಸಲ್ಲಿಸಿದರು. ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಸಮ್ಮಾನಿಸಿ, ಗೌರವಿಸಿ ಮಾತನಾಡಿದರು. ರಾಜ್ಯೋತ್ಸವ ಪುಸ್ಕೃತರಾಗಿರುವ ಸನತ್ ಕುಮಾರ್ ಬೆಳಗಲಿ, ಎನ್.ಎಸ್.ಶಂಕರ್, ಕಾರಟಗಿ, ರಾಮಕೃಷ್ಣ ಅವರೆಲ್ಲರೂ ನನಗೆ ವೈಯುಕ್ತಿಕವಾಗಿ ಸಾಕ್ಷಿಪ್ರಜ್ಞೆ ಆಗಿದ್ದಾರೆ ಜೊತೆಗೆ ಪತ್ರಿಕಾ ವೃತ್ತಿಯ ಸಾಕ್ಷಿಪ್ರಜ್ಞೆ ಕೂಡ ಆಗಿದ್ದಾರೆ ಎಂದರು. ಸನತ್ ಕುಮಾರ್ ಬೆಳಗಲಿ ಮತ್ತು ಎನ್.ಎಸ್.ಶಂಕರ್ ಅವರಿಗೆ ಯಾವತ್ತೋ ರಾಜ್ಯೋತ್ಸವ ಪ್ರಶಸ್ತಿ ಬರಬೇಕಿತ್ತು. ಆದರೆ ನಮ್ಮ ಅವಧಿಯಲ್ಲಿ ಸಿಕ್ಕಿರುವುದು ನಮ್ಮ ಸೌಭಾಗ್ಯ. ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರು ನನ್ನ ಸಹದ್ಯೋಗಿಗಳು, ಸಮಕಾಲೀನರೂ ಇದ್ದಾರೆ. ನಾವೆಲ್ಲಾ ಒಟ್ಟೊಟ್ಟಿಗೇ ಒಡನಾಡಿಕೊಂಡು ಪತ್ರಿಕೋದ್ಯಮದ ಭಾಗ ಆಗಿದ್ದವರು. ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ. ಬೇರೆ ಬೇರೆ ಸಾಮಾಜಿಕ ಹಿನ್ನೆಲೆಯಿಂದ ಬಂದು ಪತ್ರಿಕಾ ವೃತ್ತಿಯನ್ನು ಅರ್ಥಪೂರ್ಣಗೊಳಿಸಿದ್ದಾರೆ, ಪತ್ರಿಕಾ ವೃತ್ತಿಯ ವಿಶ್ವಾಸಾರ್ಹತೆಯನ್ನು ಕಾಪಾಡಲು ಇಷ್ಟೂ ಮಂದಿ ತಮ್ಮ ಪಾಲನ್ನು ಒದಗಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಆರೋಗ್ಯ ಸಂಜೀವಿನಿ ಜಾರಿಗೆ ಯತ್ನ
ಪತ್ರಕರ್ತ ಸಮುದಾಯಕ್ಕೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಆರೋಗ್ಯ ಸಂಜೀವಿನಿ ಸೌಲಭ್ಯವನ್ನು ಆದಷ್ಟು ಬೇಗ ಒದಗಿಸಿಕೊಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಆರಂಭಿಸಿದ್ದೇನೆ. ಮುಖ್ಯಮಂತ್ರಿಗಳು ನಮ್ಮ ಈ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಎಂದು ಆಶಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತ ನಾಲ್ವರು ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರಾದ ಎಂಟು ಮಂದಿಗೆ ಸನ್ಮಾನಿಸಲಾಯಿತು. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಸೇರಿ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…