ಸುಬ್ರಹ್ಮಣ್ಯ; ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಆರಂಭಗೊಳ್ಳಲಿದೆ.
ನವೆಂಬರ್ 27 ರಂದು ರಾಮ ಲಕ್ಷ÷್ಣಣ ಎಂಬ ಜೋಡು ಕೊಪ್ಪರಿಗೆ ಏರುವ ಮೂಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾ ಷಷ್ಠಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಡಿಸೆಂಬರ್ 7 ರಂದು ಪ್ರಾತಃ ಕಾಲ ಚಂಪಾಷಷ್ಠಿ ಮಹಾ ರಥೋತ್ಸವ ನಡೆಯಲಿದೆ.
ಡಿಸೆಂಬರ್ 12 ರಂದು ಕೊಪ್ಪರಿಗೆ ಇಳಿದು ಶ್ರೀ ದೇವರಿಗೆ ನೀರ ಬಂಡಿ ಉತ್ಸವ ನಡೆದು ಶ್ರೀ ಕ್ಷೇತ್ರದ ದೈವಗಳಿಗೆ ನಡವಳಿ ನಡೆಯುವ ಮೂಲಕ ಚಂಪಾ ಷಷ್ಠಿ ಮಹೋತ್ಸವ ಮುಕ್ತಾಯವಾಗಲಿದೆ.ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…