ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಹಾಗೂ ಬಂಟರ ಸಂಘ ಮುಂಬಯಿಯ ಸಹಯೋಗದೊಂದಿಗೆ ಡಿ.೭ರ ಶನಿವಾರದಂದು ಮುಂಬೈ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ವಿಶ್ವ ಬಂಟ ಸಮಾಗಮ ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಮುಂಬೈ ಬಂಟರ ಭವನ ಆವರಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು, ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ್ರು. ಸಮಾರಂಭವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು. ಈ ವೇಳೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮಾತನಾಡಿ, ವಿಶ್ವ ಬಂಟ ಸಮಾಗಮದ ಸಂಪೂರ್ಣ ಮಾಹಿತಿಯನ್ನು ನೀಡಿ, ಕಾರ್ಯಕ್ರಮದ ಯಶಸ್ವಿಗೆ ಸರ್ವರ ಸಹಕಾರ ಅತೀ ಅಗತ್ಯ ಎಂದ್ರು. ಮಹಾವಿಷ್ಣು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ವಿಶ್ವ ಬಂಟ ಸಮಾಗಮ ಕಾರ್ಯಕ್ರಮಕ್ಕೆ ವಿಶ್ವದೆಲ್ಲೆಡೆ ಇರುವ ಬಂಟರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ರು.
ಆಮಂತ್ರಣ ಪತ್ರಿಕಾ ಬಿಡುಗಡೆ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ದಾನಿ ಹಾಗೂ ಮೆರಿಟ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕ ಬೆಲ್ಲಾಡಿ ಅಶೋಕ್ ಶೆಟ್ಟಿ, ಒಕ್ಕೂಟದ ನಿರ್ದೇಶಕ ಹಾಗೂ ಬಂಟರ ಸಂಘ ಮುಂಬಯಿಯ ಜೊತೆ ಕೋಶಾಧಿಕಾರಿ ಶಶಿಧರ ಕೆ ಶೆಟ್ಟಿ ಇನ್ನಂಜೆ, ಬಂಟರ ಸಂಘ ಮುಂಬಯಿಯ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಪೊವಾಯಿ ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ಮುಂಡ್ಕೂರು ರತ್ನಾಕರ್ ಶೆಟ್ಟಿ, ಮಧ್ಯವಲಯ ಪ್ರಾದೇಶಿಕ ಸಮಿತಿ ಸಮನ್ವಯಕ ರವೀಂದ್ರನಾಥ್ ಎಮ್ ಭಂಡಾರಿ, ಬಂಟರವಾಣಿ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ, ಸಿಟಿ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಪಕ್ಕಳ, ಕಟ್ಟಡ ನಿರ್ವಹಣಾ ಸಮಿತಿ ಕಾರ್ಯಾಧ್ಯಕ್ಷ ಹರೀಶ್ ಪಡುಬಿದ್ರೆ, ಜ್ಞಾನಮಂದಿರ ಸಮಿತಿ ಉಪಕಾರ್ಯಾಧ್ಯಕ್ಷ ನಲ್ಯಗುತ್ತು ಪ್ರಕಾಶ್ ಶೆಟ್ಟಿ, ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಕೊಟ್ರಪಾಡಿಗುತ್ತು, ಸುರೇಶ್ ಶೆಟ್ಟಿ ಯೆಯ್ಯಾಡಿ, ಧನಂಜಯ್ ಶೆಟ್ಟಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಾಜಿ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಶ್ರೀಮತಿ ವಜ್ರ ಪೂಂಜ, ವಿನುತ ಶೆಟ್ಟಿ, ವಿಠ್ಠಲ್ ಆಳ್ವ, ಸಾಹತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ, ಕ್ಯಾಟರಿಂಗ್ ಸಮಿತಿ ಕಾರ್ಯಾಧ್ಯಕ್ಷ ಶಿವರಾಮ್ ಶೆಟ್ಟಿ ಕಾರ್ಯಾನಗುತ್ತು, ದಿವಾಕರ್ ಶೆಟ್ಟಿ, ಅಶೋಕ್ ಶೆಟ್ಟಿ ಕಾಪು, ಸದಸ್ಯತನ ನೊಂದಣಿ ಸಮಿತಿ ಕಾರ್ಯಾಧ್ಯಕ್ಷ ಅನಿಲ್ ಶೆಟ್ಟಿ ಪಾಂಗಳ, ಜ್ಞಾನ ಮಂದಿರ ಸಮಿತಿ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ ಇವರುಗಳು ಉಪಸ್ಥಿತರಿದ್ದರು.



