ನಕ್ಸಲ್ ಸಮಸ್ಯೆಯು ಕೇವಲ ಕರ್ನಾಟಕದಲ್ಲಿ ಮಾತ್ರ ಇರುವುದಲ್ಲ, ನಕ್ಸಲ್ ಸಮಸ್ಯೆಯು ದೇಶದಾದ್ಯಂತ ಇರುವಂತಹ ರಾಷ್ಟ್ರೀಯ ಸಮಸ್ಯೆಯಾಗಿದೆ. ದೇಶದ ಭದ್ರತೆಗೂ ನಕ್ಸಲೀಯರು ತೊಡಕನ್ನುಂಟು ಮಾಡುತ್ತಿದ್ದಾರೆ. ನಕ್ಸಲ್ ದಾಳಿಗಳಿಂದಾಗಿ ಹಲವಾರು ರಾಜ್ಯಗಳಲ್ಲಿ ನಮ್ಮ ಭದ್ರತಾ ಪಡೆಗಳ ಜವಾನರು ಪೊಲೀಸರು ಬಲಿಯಾಗಿರುವುದು ವರದಿಯಾಗುತ್ತಿವೆ. ನಕ್ಸಲ್ ದಾಳಿಗಳಿಗೆ ನಮ್ಮ ವೀರ ಸೈನಿಕರು, ಪೊಲೀಸರು ಬಲಿಯಾಗಿರುವ ಘಟನೆಗಳು ಇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿರುವ, ದೇಶದ ಭದ್ರತೆಗೆ ಕಂಟಕರಾಗಿರುವ ನಕ್ಸಲ್ ಸಮಸ್ಯೆಯ ಮೂಲೋತ್ಪಾಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡುವುದು ಸದ್ಯದ ಅನಿವಾರ್ಯತೆಯಾಗಿದೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ ನಕ್ಸಲ್ ಸಮಸ್ಯೆಯು ತಲೆದೋರುತ್ತಿದೆ. ಒಂದು ರಾಷ್ಟ್ರೀಯ ಸಮಸ್ಯೆ, ದೇಶದ ಭದ್ರತೆಗೆ ಸವಾಲಾಗಿರುವ ವಿಚಾರವನ್ನು ಕೇವಲ ಕರ್ನಾಟಕಕ್ಕೆ ಮಾತ್ರಾ ಸೀಮಿತಗೊಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ನಕ್ಸಲ್ ಸಮಸ್ಯೆ ಹುಟ್ಟಿಕೊಂಡಿದೆ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡುವ ಸುನೀಲ್ ಕುಮಾರ್ ಅವರದ್ದು ಬೌಧಿಕ ದಿವಾಳಿತನವಾಗಿದೆ. ತಮ್ಮ ಮೇಲೆ ದಾಳಿ ನಡೆದರೂ ಜೀವದ ಹಂಗು ತೊರೆದು ನಕ್ಸಲ್ ದಾಳಿಯನ್ನು ದೈರ್ಯವಾಗಿ ಹಿಮ್ಮೆಟ್ಟಿಸಿದ ನಮ್ಮ ಪೋಲೀಸರ ಸಾಹಸೀ ಕಾರ್ಯವನ್ನು ಒಬ್ಬ ಶಾಸಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುನೀಲ್ ಕುಮಾರ್ ಅವರು ಶ್ಲಾಘಿಸುವುದನ್ನು ಬಿಟ್ಟು ಅದರಲ್ಲೂ ಕಾಂಗ್ರೆಸ್ ಬಿಜೆಪಿ ಎಂದು ರಾಜಕೀಯದ ಬಣ್ಣ ಬಳಿಯಲು ಯತ್ನಿಸಿರುವುದು ನಮ್ಮ ಪೊಲೀಸರಿಗೆ ಮಾಡಿದ ಅವಮಾನವಾಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಇನ್ನಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…