ಮುಲ್ಕಿ:ನಗರ ಪಂಚಾಯತ್ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಹರ್ಷರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮುಲ್ಕಿ ನಗರ ಪಂಚಾಯತ್ ಮಾಸಿಕ ಸಭೆಯಲ್ಲಿ ಹರ್ಷರಾಜ ಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾದರು. ನೂತನವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹರ್ಷರಾಜ ಶೆಟ್ಟಿ ರವರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಸತೀಶ್ ಅಂಚನ್, ಮುಖ್ಯಾಧಿಕಾರಿ ಮಧುಕರ್, ಸದಸ್ಯರಾದ ಪುತ್ತು ಬಾವ,ಯೋಗೀಶ್ ಕೋಟ್ಯಾನ್, ಸುಭಾಷ್ ಶೆಟ್ಟಿ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್,ಜೋನ್ ಕ್ವಾಡ್ರಸ್ , ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು,
ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನಕೋಟ್ಯಾನ್ ನಡಿಕುದ್ರು,ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಡಾಕ್ಟರ್ ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಉಮೇಶ್ ಮಾನಂಪಾಡಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ



