ಕರಾವಳಿ

ಜಲ ಸಂರಕ್ಷಣೆಗೆ ಮಕ್ಕಳು ಮುಂದಾಗಬೇಕು; ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಚೇತನ್

ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿ ಮಕ್ಕಳಿಗೆ ಜಲ ಸಾಕ್ಷರತೆಯನ್ನು ಮೂಡಿಸುವ ಸಲುವಾಗಿ ನೀರು ಮತ್ತೆ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ  ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago