ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ. ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದಾರೆ.
ಇದೇ ವೇಳೆ, ಲೋಕೋಪಯೋಗಿ ರಸ್ತೆ ಅತಿಕ್ರಮಿಸಿರುವ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಬೋರ್ಡ್ ಗಳನ್ನ ಕೆಡವಲು ನಿಮಗೆ ತಾಕತ್ತಿಲ್ಲವೇ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್ ಆರ್.ಬಿ, ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಅತಿಕ್ರಮಿತ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ದೇರಳಕಟ್ಟೆಯಿಂದ ಕುತ್ತಾರು, ಪಂಡಿತ್ ಹೌಸ್ ತನಕದ ರಸ್ತೆ ಇಕ್ಕೆಲಗಳನ್ನ ಅತಿಕ್ರಮಿಸಿದ ಅಂಗಡಿ, ಮಳಿಗೆಗಳನ್ನ ಜೆಸಿಬಿ ಯಂತ್ರದಿಂದ ಕೆಡವಲಾಗಿದೆ. ಅಂಗಡಿ, ಮಳಿಗೆಗಳ ಮುಂದೆ ರಸ್ತೆ ಅತಿಕ್ರಮಿಸಿ ಅಳವಡಿಸಲಾಗಿದ್ದ ಶೀಟ್ ಛಾವಣಿ, ಆವರಣ ಗೋಡೆ, ಇಂಟರ್ ಲಾಕ್ ಗಳನ್ನ ಕೆಡವಲಾಗಿದೆ.
ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು ಅಂಗಡಿಗಳಲ್ಲಿ ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹ ಬಡ ವ್ಯಾಪಾರಿಗಳು ನಷ್ಟ, ಸಮಸ್ಯೆ ಅನುಭವಿಸುವಂತಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಯವರು ರಸ್ತೆಯನ್ನ ಅತಿಕ್ರಮಿಸಿ ದೊಡ್ಡ ದೊಡ್ಡ ಬೋರ್ಡ್ ಗಳನ್ನ ಹಾಕಿದ್ದು ಉಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಾಕತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಲೋಕೋಪಯೋಗಿ ರಸ್ತೆ ಅತಿಕ್ರಮಿತ ಅಂಗಡಿ, ಮುಂಗಟ್ಟುಗಳಿಗೆ ನಾವು ಇಲಾಖೆಯಿಂದ ಕಳೆದ ಆರು ತಿಂಗಳಿಂದ ಮೂರು ಬಾರಿ ನೋಟೀಸು ನೀಡಿದ್ದೇವೆ. ಅಷ್ಟಲ್ಲದೆ ಅಂಗಡಿಗಳ ಗೋಡೆಗೂ ನೋಟೀಸನ್ನ ಅಂಟಿಸಿದ್ದೇವೆ. ಕೆಲ ಅಂಗಡಿ ಮಾಲೀಕರು ಅದನ್ನ ಲೆಕ್ಕಿಸದೆ ನೋಟೀಸೆ ಪೈಂಟ್ ಬಳಿದಿದ್ದಾರೆ. ರಸ್ತೆ ಅತಿಕ್ರಮಿತ ಮಳಿಗೆಗಳನ್ನ ತೆರವುಗೊಳಿಸಲು ನಮಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಹಾಗಾಗಿ ತೆರವು ಕಾರ್ಯಾಚರಣೆ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…