ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಜಿಲ್ಲೆಯಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕನಿಷ್ಟ ಐದು ಮಂದಿಯಾದರೂ ಐಎಎಸ್, ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾಗುವ ಛಲ ಹೊಂದಬೇಕು. ಆ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…