ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರೂ ಕ್ಷೇತ್ರದ ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ ಆಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವ ಕುಮಾರ್ ರವರ ಕಾರ್ಯ ವೈಖರಿಯನ್ನು ಜನತೆ ಒಪ್ಪಿ ಕೊಂಡಿದ್ದಾರೆ.
ಜನರ ಮನೆಗೆ ತಲುಪುವ ವಿವಿಧ ಭಾಗ್ಯಗಳ ಸೇವೆಯನ್ನು ಜನ ಒಪ್ಪಿ ಕೊಂಡಿರುವುದು ಈ ಚುನಾವಣೆಯಲ್ಲಿ ಸ್ಪಷ್ಟ ಆಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಮೂರೂ ವಿಧಾನಸಭಾ ಕ್ಷೇತ್ರಗಳ ಗೆಲುವು ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದಂತಾಗಿದೆ. ಕ್ಲೀನ್ ಇಮೇಜನ್ನು ಹೊಂದಿರುವ ಸಿದ್ದರಾಮಯ್ಯನವರು ಕಳಂಕರಹಿತ ಮುಖ್ಯಮಂತ್ರಿ ಹಾಗೂ ಡಿ ಕೆ ಶಿವ ಕುಮಾರ್ ರವರು ಉತ್ತಮ ಆಡಳಿತಗಾರ ಎಂಬುದನ್ನು ಮತದಾರ ಪ್ರಭುಗಳು ಮತ್ತೊಮ್ಮೆ ಸಾಭೀತು ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ಕಾಂಗ್ರೆಸ್ ಆಡಳಿತವು ರಾಜ್ಯದ ಜನತೆಯ ಮನಸ್ಸು ಗೆದ್ದಿದೆ ಎನ್ನುವುದಕ್ಕೆ ಇಂದಿನ ತೀರ್ಪು ಸಾಕ್ಷಿಯಾಗಿದೆ. ಕಾಂಗ್ರೆಸ್ ಆಡಳಿತವನ್ನು ಪೂರ್ಣ ಮನಸ್ಸಿನಿಂದ ಬೆಂಬಲಿಸಿದ ಮತದಾರ ಪ್ರಭುವಿಗೆ ಧನ್ಯವಾದಗಳು ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…