ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅವರು ಅಗಲಿದ್ದಾರೆ.
ರೈತ, ಕಾರ್ಮಿಕ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಅವರು, ಸಾಮಾಜಿಕ ನ್ಯಾಯಪರ ಹೋರಾಟ ಸಮಿತಿ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪನೆ ಮಾಡಿ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಟೂರಿಸ್ಟ್ ಕಾರು ಚಾಲಕ ಮತ್ತು ಮಾಲೀಕರ ಸಂಘದ ಬಂಟ್ವಾಳ ತಾಲೂಕು ಸ್ಥಾಪಕಾಧ್ಯಕ್ಷರಾಗಿ, ಪ್ರಸ್ತುತ ಗೌರವಾಧ್ಯಕ್ಷರೂ ಆಗಿದ್ದ ಅವರು ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ, ಟೋಲ್ ಗೇಟ್ ವಿರೋಧಿ ಹೋರಾಟ, ಹೆದ್ದಾರಿ ಅಭಿವೃದ್ಧಿ ಪರ ಹೋರಾಟ ಸಹಿತ ಹಲವು ಜನಪರ ಹೋರಾಟಗಳನ್ನು ಸಂಘಟಿಸುವ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುತ್ತಿದ್ದರು. ಸಾಮಾಜಿಕ ಸಮಸ್ಯೆಗಳು ಹಾಗೂ ಸಮಕಾಲೀನ ವ್ಯವಸ್ಥೆಯಲ್ಲಿನ ಅಸಮಾನತೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದ ಅವರು, ಸದಾ ಸಮಸ್ಯೆಗಳ ವಿರುದ್ಧ ಹೋರಾಟವನ್ನು ಸಂಘಟಿಸುತ್ತಿದ್ದರು. ಅವರ ನಿಧನಕ್ಕೆ ವಿವಿಧ ಜನಪರ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…