ಉಡುಪಿ: ಕಾಂತಾರ ಸಿನೆಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಾಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.
ಮುದೂರಿನಲ್ಲಿ ಕಾಂತಾರ ಸಿನೆಮಾ ನೃತ್ಯ ಚಿತ್ರೀಕರಣ ಮುಗಿಸಿ ಸುಮಾರು 20ಕ್ಕೂ ಮಿಕ್ಕಿ ಕಿರಿಯ ನೃತ್ಯ ಕಲಾವಿದರು ತಮ್ಮ ವಸತಿಗೃ
ಹಕ್ಕೆ 407 ಬಸ್‌ನಲ್ಲಿ ವಾಪಾಸಾಗಿತ್ತಿದ್ದ ವೇಳೆ ಚಾಲಕ ಎದುರಿಗೆ ಬಂದ ಬೈಕ್ ಅನ್ನು ತಪ್ಪಿಸುವ ಭರದಲ್ಲಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡ ಹಲವು ಕಲಾವಿದರಿಗೆ ಜಡ್ಕಲ್ ಮಹಾಲಕ್ಷ್ಮೀ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನಿಗೆ ಥಳಿತ: ಆಕ್ರೋಶ
ಚಾಲಕ ಮೊಬೈಲ್ ಬಳಕೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಬಸ್ ಪಲ್ಟಿಯಾದ ಬಳಿಕ ಉಪ್ಪುಂದ ಮೂಲದ ಟೂರಿಸ್ಟ್ ಬಸ್ ಚಾಲಕನಿಗೆ ಕಲಾವಿದರು ಥಳಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಟೂರಿಸ್ಟ್ ಚಾಲಕ ಸಂಘದ ಸದಸ್ಯರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…