ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್(32) ತನ್ನ ಪತ್ನಿ ಪ್ರಿಯಾಂಕಾ(28) ಮತ್ತು ನಾಲ್ಕು ವರ್ಷದ ಮಗು ಹೃದಯ್ ಎಂಬವರನ್ನು ಕೊಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ನವೆಂಬರ್ 9ರಂದು ಪ್ರಕರರಣ ಬೆಳಕಿಗೆ ಬಂದಿತ್ತು. ಡೆತ್‌ನೋಟ್‍ನಲ್ಲಿ ಘಟನೆಗೆ ತನ್ನ ತಾಯಿ ಮತ್ತು ಸಹೋದರಿಯ ಕಿರುಕುಳ ಕಾರಣವೆಂದು ಪ್ರಸ್ತಾಪಿಸಿದ್ದ. ಈ ಬಗ್ಗೆ ಮುಲ್ಕಿ ಪೊಲೀಸರು ಕಾರ್ತಿಕ್ ಭಟ್‍ನ ಪತ್ನಿ ಪ್ರಿಯಾಂಕಾಳ ತಾಯಿ ನೀಡಿದ ದೂರಿನ ಆಧಾರದಲ್ಲಿ ಕಾರ್ತಿಕ್‍ನ ತಾಯಿ ಶ್ಯಾಮಲ ಭಟ್ ಮತ್ತು ಮಗಳು ಕಣ್ಮಣಿಯನ್ನು ಬಂಧಿಸಿ ಮೂಡುಬಿದಿರೆ ಕೋರ್ಟ್‍ಗೆ ಹಾಜರುಪಡಿಸಿದ್ದು ಕೋರ್ಟ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಅವರಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…