ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 04 ರಂದು ರಾತ್ರಿ ಬೆಳ್ಳಿಯ ಆಭರಣಗಳನ್ನು ಹಾಗೂ ನಗದನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳವು ಪ್ರಕರಣದ ಕುಖ್ಯಾತ ಕಳ್ಳರ ತಂಡವನ್ನು ದ.ಕ ಜಿಲ್ಲಾ ಪೋಲೀಸರ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ, ಬಂಟ್ವಾಳ ತಾಲೂಕು ಇರಾ ಎಂಬಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುತ್ತಾರೆ.
ಬಂಧಿತರಿಂದ ರೂ 1,25,000/-ಮೌಲ್ಯದ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಿಕೊಂಡಿದ್ದಾರೆ.
ಕೇರಳ ರಾಜ್ಯ, ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ,
ಬಶೀರ್ ಕೆ ಪಿ, @ ಆಕ್ರಿ ಬಶೀರ್, (44), ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅಲಪ್ಪಾಡ್ ನಿವಾಸಿ ಪ್ರಕಾಶ್ ಬಾಬು @ ಮಹಮ್ಮದ್ ನಿಯಾಝ್,
( 46), ಬಂಟ್ವಾಳ ತಾಲೂಕಿನ ಪುದು ಗ್ರಾಮದ
ಎಫ್. ಜೆ. ಮಹಮ್ಮದ್ ಇಸ್ಮಾಯಿಲ್( 53 ) ಬಂಧಿತ ಆರೋಪಿಗಳು.
ಆರೋಪಿಗಳ ಪೈಕಿ ಬಶೀರ್ ಕೆಪಿ ಎಂಬಾತನು ಕುಖ್ಯಾತ ಕಳ್ಳನಾಗಿದ್ದು, ಈತನ ವಿರುದ್ದ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 13 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಮತ್ತು ಆರೋಪಿ ಪ್ರಕಾಶ್ ಬಾಬು @ ಮಹಮ್ಮದ್ ನಿಯಾಝ್ ಎಂಬಾತನ ವಿರುದ್ದ 03 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.
ಕುಖ್ಯಾತ ಕಳ್ಳರು ಕೇರಳ ರಾಜ್ಯದವರಾಗಿದ್ದು, ಬಂಟ್ವಾಳದ ತುಂಬೆ ದೇವಸ್ಥಾನದ ಕಳ್ಳತನಕ್ಕೆ ಸಮೀಪದ ಗ್ರಾಮವಾದ ಪುದುವಿನ ಇಸ್ಮಾಯಿಲ್ ನೆರವು ಪಡೆದು ಕಳ್ಳತನ ನಡೆಸಿರುವುದು ಪೋಲೀಸ್ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ.
ಸುಳಿವು ಇಲ್ಲದ ಪ್ರಕರಣ
ತುಂಬೆ ದೇವಸ್ಥಾನದಲ್ಲಿ ಕಳ್ಳರು ಅತ್ಯಂತ ಬುದ್ಧಿವಂತಿಕೆಯಿಂದ ಸಿಸಿಕ್ಯಾಮರದ ಪೂಟೇಜ್ ಗಳನ್ನು ಕದ್ದು ಕೊಂಡು ಹೋಗಿದ್ದರು.
ಹಾಗಾಗಿ ಪೋಲೀಸರಿಗೆ ಯಾವುದೇ ಸುಳಿವು ಇಲ್ಲದ ಪ್ರಕರಣವನ್ನು ಆರಂಭದಲ್ಲಿ ಬೇಧಿಸಲು ತಲೆನೋವಾಗಿ ಪರಿಣಮಿಸಿತ್ತು ಆದರೂ ವಿಶೇಷ ಪ್ರಯತ್ನದ ಮೂಲಕ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದ.ಕ. ಜಿಲ್ಲಾ ಪೊಲೀಸ್ ಆಧೀಕ್ಷಕ ಯತೀಶ್ ಎನ್, ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿಎಸ್ ರವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ಎಸ್ ವಿಜಯಪ್ರಸಾದ್ ರವರ ನೇತೃತ್ವದ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ ಬಿ ಮತ್ತು ಪುಂಜಾಲಕಟ್ಟೆ ಪಿಎಸ್‌ಐ ನಂದ ಕುಮಾರ್ ಗ್ರಾಮಾಂತರ ಪಿಎಸ್ ಐಗಳಾದ ಹರೀಶ್ ಎಮ್ ಲೋಲಾಕ್ಷ ಹಾಗೂ ಸಿಬ್ಬಂಧಿಗಳಾದ ಉದಯ ರೈ, ಪ್ರವೀಣ್ ಎಮ್, ಅದ್ರಾಮ, ಹರಿಶ್ಚಂದ್ರ, ನಝೀರ್, ಕೃಷ್ಣ ನಾಯ್ಕ್, ಸಂತೋಷ್, ರಾಹುಲ್ ರಾವ್, ಅಶೋಕ್, ವಿವೇಕ್ ಕೆ, ಕುಮಾರ್ ಹೆಚ್.ಕೆ, ಬಸವರಾಜ್, ರಮ್‌ಜಾನ್, ಕುಮಾರ, ಮಹಾಂತೇಶ್ ಮತ್ತು ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್, ದಿವಾಕರ ರವರುರವರನ್ನೊಳಗೊಂಡ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…