ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿರುವ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು.
ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವೋ ಅವರ ಸಹಿತ ಮೂವರ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಸ್ಪ್ಯಾನಿ ಮೇಸ್ತ್ರಿ ಎಂಬವರನ್ನು ಆರಂಭದಲ್ಲಿ ಬಂಧಿಸಿದ್ದರು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಹೆನ್ರಿ ತಾವೋ ಅವರ ಪುತ್ರನ ವಿರುದ್ಧವೂ ಆದಿ ದ್ರಾವಿಡ ಸಂಘಟನೆ ಪೊಲೀಸರಿಗೆ ದೂರು ನೀಡಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಹೆನ್ರಿ ತಾವೋ, ಅವರ ಪುತ್ರ ಕಿರಣ್ ಮತ್ತು ಸಹಾಯಕ ಪ್ರಕಾಶ್ ಎಂಬವರನ್ನು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಹೆನ್ರಿ ತಾವೋ ಅವರ ಬಂಧನಕ್ಕೆ ಆಗ್ರಹಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನ.22ರಂದು ಪ್ರತಿಭಟನೆ ನಡೆದಿತ್ತು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…