ಬೇಲೂರು :ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ತಂದೆ ಮೃತಪಟ್ಟು, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೇಲೂರು ತಾಲ್ಲೂಕಿನ, ಕೊರಟಿಗೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಚಿಕ್ಕಮಗಳೂರು ಮೂಲದ, ಬೇಲೂರಿನಲ್ಲಿ ಬಟ್ಟೆ ಅಂಗಡಿ ಹೊಂದಿದ್ದ ದಯಾನಂದ (46) ಮೃತ ವ್ಯಕ್ತಿ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ, ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ದಯಾನಂದ ಅವರು ಇಂದು ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲೆಂದು ಚಿಕ್ಕಮಗಳೂರಿನಿಂದ ಬೇಲೂರಿಗೆ ಕಾರಿನಲ್ಲಿ ಬರುತ್ತಿದ್ದರು.
ಕೊರಟಿಗೆರೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅಡಿಕೆ ತೋಟಕ್ಕೆ ಉರುಳಿ ತಲೆಕೆಳಗಾಗಿ ಬಿದ್ದಿದ್ದು ದಯಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…