ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತೆರೋ 272 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ.
ಕಳೆದ ಚುನಾವಣೆಯಲ್ಲಿ ಪಂಚಾಯತ್ ನ ಒಟ್ಟು 10 ಸ್ಥಾನಗಳಲ್ಲಿ 7 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ 1 ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಒಂದು ಸ್ಥಾನ ಹೆಚ್ಚಿಸಿಕೊಂಡಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…