ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಪುರಸಭೆಯ 2 ನೇ ವಾರ್ಡ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋ ತ್ತಮ ಪೂಜಾರಿ ಗೆಲುವು

ಬಂಟ್ವಾಳ: ಬಂಟ್ವಾಳ ಪುರಸಭೆಯ 2 ನೇ ವಾರ್ಡ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋ ತ್ತಮ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಅ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಬಿಜೆಪಿಯ ಅಭ್ಯರ್ಥಿ ಇಂದ್ರೇಶ್ ಪೂಜಾರಿ ಅವರಿಗೆ ಸೋಲಾಗಿದೆ.ಇಬ್ಬರು ರಾಜಕೀಯವಾಗಿ ಹೊಸಮುಖಗಳಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅವರು ವಿಜಯಿಯಾಗಿದ್ದಾರೆ.ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ ಪೂಜಾರಿ ಅವರು ಪಕ್ಷತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.ಇವರ ತೆರವಾದ ಸ್ಥಾನಕ್ಕೆ ನ.23 ರಂದು ‌ಶನಿವಾರ ಉಪಚುನಾವಣೆ ನಡೆದಿತ್ತು.

ಬಿಜೆಪಿ ಲೆಕ್ಕಾಚಾರ ಉಲ್ಟಾಪಲ್ಟ
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರವನ್ನು ಪಡೆಯಲು ಕೆಲವು ವಾರ್ಡ್ ಗಳನ್ನು ತನ್ನ ಹಿಡಿತಕ್ಕೆ ತರಲು ತಂತ್ರಗಾರಿಕೆಯನ್ನು ಮಾಡಿದ ಬಿಜೆಪಿಯ ಲೆಕ್ಕಾಚಾರ ಉಲ್ಟಾಪಲ್ಟವಾಗಿದೆ.
ಪುರಸಭೆಯ 2 ನೇ ವಾರ್ಡ್ ನಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದ ಗಂಗಾಧರ ಪೂಜಾರಿ ಅವರನ್ನು ಬಿಜೆಪಿಗೆ ಎಳೆದುಕೊಂಡು ತಂದಿದ್ದ ಬಿಜೆಪಿಗೆ ಕಾಂಗ್ರೆಸ್ ನ ಕೋಟೆಯನ್ನು ಬೇಧಿಸಲು ಸಾಧ್ಯವಾಗಿಲ್ಲ. ಅಮೂಲಕ ಬಿಜೆಪಿಗೆ ಮುಖಭಂಗವಾಗಿದೆ‌.ಕಾಂಗ್ರೆಸ್ ತನ್ನ ಚಾಕಚಕ್ಯತೆಯಿಂದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲತೆಯನ್ನು ಕಂಡಿದೆ. ಮತ್ತು ಸಂಘಟನಾತ್ಮಕ ರೀತಿಯಲ್ಲಿ ಪಕ್ಷ ಉತ್ತಮ ಹೆಜ್ಜೆಯನ್ನು ಇಡುತ್ತಿರುವುದು ಉಪಚುನಾವಣೆ ಗೆಲುವು ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!