ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ನ.25 ರಂದು ಬೆಳಗ್ಗೆ ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ನಡೆದಿದೆ.
ಗಾಯಗೊಂಡವರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಮಥಾಯಿ(ಮತ್ತಚ್ಚನ್)(70) ಎಂದು ಗುರುತಿಸಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿಯನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ನಿಧನರಾದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.
ಶಿರಾಡಿ ಈ ಪ್ರದೇಶದಲ್ಲಿ ಸ್ಥಳೀಯರಿಗೆ ಓಡಾಡಲು ಸರ್ವಿಸ್ ರಸ್ತೆಯನ್ನು ನಿರ್ಮಿಸಲಿಲ್ಲ ಹಾಗೂ ರಸ್ತೆ ಕ್ರಾಸಿಂಗ್ ಪೇಟೆಯ ಮಧ್ಯದಲ್ಲಿ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಲೇ ಇದೆ. ಸರ್ವಿಸ್ ರಸ್ತೆಗಾಗಿ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಊರವರ ಅಭಿಲಾಷೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…