ಕರಾವಳಿ ಮೂಲದ ಸಾಕಷ್ಟು ಕಲಾವಿದರು ಸಿನೆಮಾ ರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಪಡೆದು ಜಗತ್ತಿನ ಗಮನ ಸೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇದೀಗ ಮಂಗಳೂರು ಮೂಲದ ಮತ್ತೊಂದು ಪ್ರತಿಭಾವಂತರ ತಂಡ ಹೊಸ ಚಿತ್ರಕ್ಕೆ ಕೈಹಾಕಿದೆ. ಪಂಚರಂಗಿ ಫಿಲಂಸ್ ರವರ “ಅಮರ್ಥ” ನೂತನ ಕನ್ನಡ ಚಿತ್ರದ ಸ್ಕ್ರಿಪ್ಟ್ ಪೂಜೆ ಇಂದು ಸಹಿಹಿತ್ಲು ಭಗವತಿ ಕ್ಷೇತ್ರದಲ್ಲಿ ನಡೆಯಿತು. ಚಿತ್ರದ ನಿರ್ಮಾಪಕ ಕನ್ಯಾನ ಸದಾಶಿವ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಟ, ವಿಮರ್ಷಕ ತಮ್ಮಣ್ಣ ಶೆಟ್ಟಿ ಕ್ಲಾಪ್ ಮಾಡಿ ಶುಭಹಾರೈಸಿದರು.ಬಳಿಕ ನಡೆದ ಸರಳ ಸಮಾರಂಭದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡುತ್ತಾ, ಸಾಮಾಜಿಕವಾಗಿ ವಿವಿಧ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಇದೀಗ ಸಿನೆಮಾ ರಂಗದಲ್ಲಿ ಕೈ ಹಾಕುವ ಪ್ರಯತ್ನ ಮಾಡುತ್ತಿದ್ದೇನೆ. ಸಿನೆಮಾವನ್ನು ಯಶಸ್ವಿಗೊಳಿಸುವುದು ಎಲ್ಲರ ಕೈಯ್ಯಲಿದೆ ಎಂದ ಅವರು, ಚಿತ್ರತಂಡಕ್ಕೆ ಶುಭ ಹಾರೈಸಿದರು..ಚಿತ್ರದ ನಿರ್ಮಾಪಕರು, ಚಿತ್ರತಂಡದಲ್ಲಿರುವ ಹೆಚ್ಚಿನವರು ನನ್ನ ಆತ್ಮೀಯರು. ಹೀಗಾಗಿ ನನಗೆ ಈ ಸಿನೆಮಾದ ಬಗ್ಗೆ ಹೆಚ್ಚು ಆಸಕ್ತಿ. ‘ಅಮರ್ಥ’ ಸಿನೆಮಾ ಕನ್ನಡ ಚಿತ್ರರಂಗದ ಸಮರ್ಥ ಚಿತ್ರವಾಗಲಿ ಎಂದು ಈ ವೇಳೆ ನಟ ಶಿವಧ್ವಜ್ ಶುಭ ಹಾರೈಸಿದರು.ಧಾರಾವಾಹಿ ಕಲಾವಿದ ಗುರುರಾಜ್ ಹೆಗಡೆಯವರು ಈ ಸಿನೆಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ಚಿತ್ರಕಥೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರಾಸ್ಥಾವಿಕ ಮಾತುಗಳನ್ನು ಆಡಿದರು..ನಿರ್ದೇಶಕ ವಿನಯ್ ಪ್ರೀತಂ, ಸಿನೆಮಾದ ಕಲಾವಿದರು, ತಂತ್ರಜ್ಞರು, ದೇವಸ್ಥಾನದ ಆಡಳಿತ ಮಂಡಳಿಯವರು, ಸಿನೆಮಾ ಪ್ರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…