ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ – 8 ಮಂದಿ ಬಂಧನ

ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ ವೇಳೆ ಆತನನ್ನ ಹಿಂಬಾಲಿಸಿಕೊಂಡು ನಾಲ್ವರು ಬಂದಿದ್ದರು. ಕಲ್ಯಾಣ ಮಂಟಪಕ್ಕೆ ಬಂದು ಹೊರಗೆ ಕರೆದುಕೊಂಡು ಹೋಗಿ ಅಲ್ಲಿಂದ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿ ಬಿಟ್ಟು ಹೋಗಿದ್ದಾರೆ. ಉಮೇಶ್ ಆರೋಪಿಗಳ ಮನೆಯ ಹೆಣ್ಣುಮಕ್ಕಳಿಗೆ ಕಾಡಿಸುತ್ತಿರುವುದಾಗಿ ಸುಳ್ಳು ಹೇಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಎಂಟು ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾಗ್ತಿದ್ದಂತೆ ಇಬ್ಬರು ಮಹಿಳೆಯರು ಸೇರಿ ಎಂಟು ಜನರನ್ನು ಬಂಧಿಸಲಾಗಿದೆ. ಫೋಟೊಗ್ರಾಫರ್ ಉಮೇಶ್, ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೋಟೋಗ್ರಫಿ ವೃತ್ತಿ ವೈಷಮ್ಯದಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ ಎಂಟು ಜನರ ಬಂಧಿಸಲಾಗಿದೆ.

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!