ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ ವೇಳೆ ಆತನನ್ನ ಹಿಂಬಾಲಿಸಿಕೊಂಡು ನಾಲ್ವರು ಬಂದಿದ್ದರು. ಕಲ್ಯಾಣ ಮಂಟಪಕ್ಕೆ ಬಂದು ಹೊರಗೆ ಕರೆದುಕೊಂಡು ಹೋಗಿ ಅಲ್ಲಿಂದ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿ ಬಿಟ್ಟು ಹೋಗಿದ್ದಾರೆ. ಉಮೇಶ್ ಆರೋಪಿಗಳ ಮನೆಯ ಹೆಣ್ಣುಮಕ್ಕಳಿಗೆ ಕಾಡಿಸುತ್ತಿರುವುದಾಗಿ ಸುಳ್ಳು ಹೇಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಎಂಟು ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾಗ್ತಿದ್ದಂತೆ ಇಬ್ಬರು ಮಹಿಳೆಯರು ಸೇರಿ ಎಂಟು ಜನರನ್ನು ಬಂಧಿಸಲಾಗಿದೆ. ಫೋಟೊಗ್ರಾಫರ್ ಉಮೇಶ್, ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೋಟೋಗ್ರಫಿ ವೃತ್ತಿ ವೈಷಮ್ಯದಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ ಎಂಟು ಜನರ ಬಂಧಿಸಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…