ಕಡಬ,ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಥಮ ಅಂಗವಾಗಿ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಮೂಲಮೃತ್ತಿಕೆಯನ್ನು ಸುಮುಹೂರ್ತದಲ್ಲಿ ವಿವಿಧ ವೈಧಿಕ ವಿಧಾನಗಳ ಮೂಲಕ ತೆಗೆದರು. ಆರಂಭದಲ್ಲಿ ಶ್ರೀ ದೇವಳದ ಪುರೋಹಿತರಿಗೆ ಮತ್ತು ಆಡಳಿತ ಮಂಡಳಿಗೆ ಮೂಲಮೃತ್ತಿಕೆ ನೀಡಿದರು. ಬಳಿಕ ಭಕ್ತಾಧಿಗಳಿಗೆ ವಿತರಿಸಿದರು. ಶ್ರದ್ಧಾಭಕ್ತಿಯಿಂದ ಈ ಮಹಾಪ್ರಸಾದವನ್ನು ಭಕ್ತರು ಸ್ವೀಕರಿಸಿದರು.

ಸರದಿ ಸಾಲು:
ಸಹಸ್ರಾರು ಭಕ್ತರು ಬೆಳಗ್ಗೆ ೧೦ ಗಂಟೆಯಿAದಲೇ ಸರತಿ ಸಾಲಿನಲ್ಲಿ ನಿಂತು ಮೃತ್ತಿಕಾ ಪ್ರಸಾದ ಪಡೆದರು. ಹೆಚ್ಚಿನ ಸಂಖ್ಯೆಯಲ್ಲಿ ಊರ ಭಕ್ತಾಧಿಗಳು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಶ್ರೀದೇವಳದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇದ್ದುದರಿಂದ ಮಧ್ಯಾಹ್ನ ೨ ಗಂಟೆಯ ನಂತರ ಭಕ್ತಾಧಿಗಳಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಲಾಯಿತು.ಏಕಾದಶಿ ದಿನವಾದುದರಿಂದ ಶ್ರೀ ದೇವರ ದರುಶನದ ಬಳಿಕ ಆಯ್ದ ಸೇವೆಗಳನ್ನು ಭಕ್ತರು ನೆರವೇರಿಸಿದರು.

ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷಿö್ಮಶ ಗಬ್ಲಡ್ಕ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಸ್ಟರ್‌ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ,ಪವನ್ ಎಂ.ಡಿ, ಅಚ್ಚುತ ಆಲ್ಕಬೆ, ಸೇರಿದಂತೆ ದೇವಳದ ಸಿಬ್ಬಂದಿಗಳು, ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.




