ಬಿಜೆಪಿಯವರ ಕುತಂತ್ರದಿಂದಾಗಿ ಕಾಂಗ್ರೆಸ್ ಸದಸ್ಯರೊಬ್ಬರು ಸ್ಥಾನ ಕಳಕೊಂಡಿದ್ದರೂ, ಕಾರ್ಯಕರ್ತರ ಒಗ್ಗಟ್ಟಿನ ಪರಿಣಾಮದಿಂದಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನ ಉಳಿಸಿಕೊಳ್ಳಲು ಸಾಧ್ಯವಾಯಿತು ಮುಂದಿನ ದಿನದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಚುನಾವಣೆಗೆ ಸಜ್ಜಾಗೋಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ನುಡಿದರು.
ಅವರು ಹಳೆಯಂಗಡಿ ಪಂಚಾಯತ್ ಎರಡನೇ ವಾರ್ಡಿನ ಉಪಚುನಾವಣೆಯಲ್ಲಿ ಜಯಭೇರಿಗಳಿಸಿದ ಶ್ರೀಮತಿ ಸುಚಿತ್ರ ಪ್ರಸನ್ನ ಕುಮಾರ್ ರವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಕೆಪಿಸಿಸಿ ಸದಸ್ಯರಾದ ಎಚ್ ವಸಂತ್ ಬರ್ನಾಡ್ ಮಾತನಾಡಿ ಬಿಜೆಪಿ ಅವರ ಯಾವ ಕುತಂತ್ರಕ್ಕೂ ಮತದಾರರು ಬೆಲೆ ಕೊಡಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮದ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪದ್ಮಾವತಿ ಶೆಟ್ಟಿ ನಾಯಕರಾದ ಶಶಿೇಂದ್ರ ಎಂ ಸಾಲಿಯನ್, ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಜಿಜ್ಯ್, ನಿರಂಜಲ ನೀತು ಶಶಿಕಲಾ ,ಅನಿಲ್ ಪೂಜಾರಿ, ಚಂದ್ರಕುಮಾರ್, ಮಾಜಿ ಅಧ್ಯಕ್ಷ ಜಲಜ ನಾಯಕರುಗಳಾದ ಧರ್ಮಾನಂದ ಶೆಟ್ಟಿಗಾರ್, ಸಂತೋಷ್ ಕೊಪ್ಪಳ ಪ್ರಸನ್ನಕುಮಾರ್, ಉತ್ತಮ್ ಕುಮಾರ್ ರಜಿಯಾ ಬಾನು ಮೊದಲಾದವರು ಇದ್ದರು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…