ಬಂಟ್ವಾಳ: ನ.30 ರಂದು ಬಂಟ್ವಾಳದ ನೂತನ ಟ್ರಾಫಿಕ್ ಪೋಲೀಸ್ ಠಾಣೆಯ ಉದ್ಘಾಟನೆಗೆ ಮುಹೂರ್ತ ಪಿಕ್ಸ್ ಆಗಿದೆ.
ಗೃಹ ಸಚಿವ ಡಾ| ಜಿ.ಪರಮೇಶ್ವರ ಅವರು ಪೋಲೀಸ್ ಠಾಣೆಯನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕೃತವಾಗಿ ಮಾಹಿತಿ ನೀಡಲಾಗಿದೆ.ಬಂಟ್ವಾಳ ವೃತ್ತದಲ್ಲಿ ಟ್ರಾಫಿಕ್ ಪೋಲಿಸ್ ಠಾಣೆ ಆರಂಭವಾಗಿದ್ದರೂ ಕೂಡ ಈ ವರೆಗೆ ಸ್ವಂತ ಕಟ್ಟಡ ಹೊಂದದೆ ಮೆಲ್ಕಾರ್ ನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯಚರಿಸುತ್ತಿತ್ತು. ಕಳೆದ ಒಂದು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನೆಪದಲ್ಲಿ ಮೆಲ್ಕಾರ್ ನಿಂದ ಮಾರ್ನಬೈಲು ಎಂಬಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ತಾತ್ಕಾಲಿಕವಾಗಿ ನೆಲೆಯೂರಿತ್ತು.
ಟ್ರಾಫಿಕ್ ಪೋಲೀಸ್ ಠಾಣೆ ಸ್ವಂತ ಕಟ್ಟಡದಲ್ಲಿ ಸೇವೆ ನೀಡಬೇಕು ಎಂದು ಇಲಾಖೆಯ ಕನಸು ಆಗಿತ್ತಾದರೂ ಕಳೆದ ಒಂದು ವರ್ಷಗಳಿಂದ ಕಾಮಗಾರಿಗೆ ವೇಗ ಪಡೆದುಕೊಂಡು ಇದೀಗ ಪಾಣೆಮಂಗಳೂರು ಹಳೆಯ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ ಗೆ ತಾಗಿಕೊಂಡು ಸುಸಜ್ಜಿತವಾದ ಜಾಗದಲ್ಲಿ ಉತ್ತಮವಾದ ಕಟ್ಟಡ ತಲೆಎತ್ತಿನಿಂತಿದೆ.
ಕಟ್ಟಡ ಕಾಮಗಾರಿ ಮುಗಿದು ತಿಂಗಳುಗಳು ಕಳೆದದರೂ ಉದ್ಘಾಟನೆಗೆ ಭಾಗ್ಯ ಒದಗಿ ಬಂದಿರಲಿಲ್ಲ.
ಇದೀಗ ಪ್ರವೇಶಕ್ಕೆ ದಿನ ನಿಗದಿಯಾಗಿದ್ದು, ನ.30 ರಂದು ಜಿಲ್ಲೆಯ ಸುಬ್ರಹ್ಮಣ್ಯ ಠಾಣೆ, ಮತ್ತು ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಜೊತೆ ಬೆಳ್ಳಾರೆ ಪೋಲಿಸ್ ಠಾಣೆಯ ವಸತಿ ಗೃಹ ಸಮುಚ್ಚಯಗಳ ಉದ್ಘಾಟನೆ ನಡೆಯಲಿದೆ ಎಂದು ಅಧಿಕೃತ ಮಾಹಿತಿ ನೀಡಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…