ಮೂಡುಬಿದಿರೆ: ತಾಲೂಕಿನ ಅಳಿಯೂರಿಗೆ ಮಂಜೂರಾಗಿರುವ ಸರಕಾರಿ ಪ.ಪೂ. ಕಾಲೇಜಿಗೆ ವಿವೇಕ ಯೋಜನೆಯಡಿ ರೂ 1ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕೊಠಡಿಗಳಿಗೆ ಶಾಸಕ ಉಮನಾಥ್ ಎ ಕೋಟ್ಯಾನ್ ಶಿಲಾನ್ಯಾಸಗೈದರು.
ಇದೇ ಸಂದರ್ಭದಲ್ಲಿ ಸಹಸ್ರ ಪೌಂಡೇಶನ್ ವತಿಯಿಂದ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸೌರಶಕ್ತಿ ಸ್ಯಾನಿಟರಿ ಪ್ಯಾಡ್ ಮೆಷಿನನ್ನು ಶಾಲೆಗೆ ಹಸ್ತಾಂತರಿಸಲಾಯಿತು.
ಪ್ರವೀಣ್ ಭಟ್ ಅಳಿಯೂರು ಅವರು ಶಿಲಾನ್ಯಾಸದ ವೈದಿಕ ಕಾರ್ಯ ನಡೆಸಿದರು.
ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಪ್ರೌಢಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್, ಶಾಲಾ ದಾನಿಗಳು, ಶಿಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…